December 23, 2024
FZs7bi0UsAAd3Bm_202208091648267138_H@@IGHT_0_W@@IDTH_600

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪತ ಕಾಮಗಾರಿಯ ಮಂದಗತಿಯಲ್ಲಿ ಸಾಗುತ್ತಿದ್ದು ಬಿ.ಸಿ ರೋಡ್‌‌‌‌ನಿಂದ ಮಾಣಿವರೆಗಿನ ಕಾಮಗಾರಿ ವಿಳಂಬವಾಗುತ್ತಿರುವುದನ್ನು ವಿರೋಧಿಸಿ ನಾಳೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿದೆ.

ಸೆಪ್ಟೆಂಬರ್ 12 ರಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ ರೋಡಿನ ಸರ್ಕಲ್ ಬಳಿ SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಶಾಹುಲ್ ಎಸ್ ಎಚ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸಭಾ ಕಾರ್ಯದರ್ಶಿ ಅಕ್ಬರ್ ಆಲಿ ಪೊನ್ನೋಡಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾಗುತ್ತಿದ್ದು ಅವೈಜ್ಞಾನಿಕತೆಯಿಂದಲೂ ಕೂಡಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಪ್ರತಿಭಟನೆಗೆ ಪ್ರದೇಶದ ಎಲ್ಲಾ ನಾಗರಿಕರು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಬಂದು ಅವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಬೇಕು ಎಂದು ಅವರು ಕೇಳಿಕೊಂಡರು

Leave a Reply

Your email address will not be published. Required fields are marked *