December 22, 2024
sanjiv khanna_20241025084404_original_image_5

ನವದೆಹಲಿ: ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಎತ್ತಿ ಹಿಡಿದಂತಹ ಪ್ರಮುಖ ವಿಷಯಗಳ ತೀರ್ಪು ಪ್ರಕಟಿಸಿದ್ದ ನ್ಯಾ| ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಸೋಮವಾರ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿ ದೌಪದಿ ಮುರ್ಮು ಅವರು ಬೆಳಗ್ಗೆ 10 ಗಂಟೆಗೆ ನಡೆಯುವ ಶಪಥ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯ ಮೂರ್ತಿಗಳಾದ ಸಂಜೀವ್ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ನಿರ್ಗಮಿತ ನ್ಯಾಯಮೂರ್ತಿಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಏರುತ್ತಿದ್ದು, ಮೇ. 13, 2025 ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ. ನ್ಯಾ. ಖನ್ನಾ ಅವರ ತಂದೆ ದೇವ್‌ರಾಜ್ ಖನ್ನಾ ಕೂಡ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದರು. ಅವರ ಚಿಕ್ಕಪ್ಪ ಎಚ್.ಆರ್.ಖನ್ನಾ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.

Leave a Reply

Your email address will not be published. Required fields are marked *