December 22, 2024
murdeshwar-students

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ಕೋಲಾರದಿಂದ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದಿವರಿದಿದೆ. ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಏತನ್ಮಧ್ಯೆ, ಮಕ್ಕಳ ಪೋಷಕರು ಹಾಗೂ ಶಾಸಕ ಸಮೃದ್ಧಿ ಮಂಜುನಾಥ್ ಬುಧವಾರ ಮುರುಡೇಶ್ವರ ತಲುಪಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಜಿಲ್ಲಾಡಳಿತದ ನೆರವಿನಿಂದ ಉಳಿದ ಮೂರು ಜನ ವಿದ್ಯಾರ್ಥಿನಿಯರ ಶವಕ್ಕಾಗಿ ಹುಡುಕಾಟ ಸಾಗಿದೆ. ಪ್ರವಾಸಕ್ಕೆ ಹೋಗಿದ್ದ ಇತರ ಮಕ್ಕಳನ್ನು ಮರಳಿ ಊರಿಗೆ ಕಳಿಸಲು ಜಿಲ್ಲಾಡಳಿತ ಹಾಗೂ ಶಾಸಕ ಸಮೃದ್ದಿ ಮಂಜುನಾಥ್ ಸಿದ್ಧತೆ ಮಾಡುತ್ತಿದ್ದಾರೆ.

ಪ್ರಾಂಶುಪಾಲೆ ಅಮಾನತು, ಸಿಬ್ಬಂದಿ ವಜಾ
ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ನೀರುಪಾಲು ಪ್ರಕರಣ ಸಂಬಂಧ ಶಾಲಾ ಪ್ರಾಂಶುಪಾಲೆ ಶಶಿಕಲಾರನ್ನು ಅಮಾನತುಗೊಳಿಸಲಾಗಿದೆ. ಅಥಿತಿ ಉಪನ್ಯಾಕರು ಮತ್ತು ಡಿ ಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಆರೋಪ ಹಿನ್ನೆಲೆ ಪ್ರಾಂಶುಪಾಲೆಯನ್ನು ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *