ಸೂರತ್: ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಐವರು ಕಾಲ್ನಡಿಗೆ ಜಾಥಾ ಹೊರಟಿದ್ದರು.ಗುಜರಾತ್ ನ ಸೂರತ್ ನಿಂದ 200 ಕಿ.ಮಿ. ದೂರದಲ್ಲಿ ಐವರು ವಿಶ್ರಾಂತಿ ಪಡೆಯುತ್ತಿದ್ದ ಓಮ್ನಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ಗಾಯಗೊಂಡಿದ್ದಾರೆ.
ಮೃತಪಟ್ಟವರ ಪೈಕಿ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ಮೂಸಾ ಶರೀಫ್ ಎಂದು ಗುರುತಿಸಲಾಗಿದೆ. ಇನ್ನೊಬ್ಬರು ಪ್ರವೀಣ್ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದು ಟ್ರಕ್ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.