March 22, 2026

ಬೆಂಗಳೂರು: ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಡುಗೋಡಿಯ ಅಪಾರ್ಟ್ಮೆಂಟ್‌ ನಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಅವಂತಿಕಾ ಚೌರಾಸಿಯಾ (15) ಎಂದು ಗುರುತಿಸಲಾಗಿದೆ.

ಕಾಡುಗೋಡಿಯ ಅಪಾರ್ಟ್ಮೆಂಟ್‌ ನಲ್ಲಿದ್ದ ಬಾಲಕಿ ಎಸ್‌ ಎಸ್‌ ಎಲ್‌ ಸಿ ಓದುತ್ತಿದ್ದಳು. ಎಸ್‌ ಎಸ್‌ ಎಲ್‌ ಸಿಯ ಪರೀಕ್ಷೆ ಹತ್ತಿರ ಬರುತ್ತಿದ್ದ ಕಾರಣ ಓದುವಂತೆ ತಾಯಿ ಗದರಿಸಿದ್ದಾರೆ. ಇದರಿಂದ ಕೋಪಗೊಂಡ ಬಾಲಕಿ ವಾಸಿಸುತ್ತಿದ್ದ ಅಪಾರ್ಟ್ಮೆಂಟ್‌ ನ 20ನೇ ಮಹಡಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.