July 11, 2025
Screenshot_20250612_144824_Chrome

ಅಹಮದಾಬಾದ್:242 ಪ್ರಯಾಣಿಕರಿದ್ದ ವಿಮಾನವೊಂದು ಗುಜರಾತ್​ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್​ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು ಹೊತ್ತು ಲಂಡನ್ ಕಡೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ​

ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಅದು ಯಾವ ರೀತಿಯ ವಿಮಾನ ಎಂದು ಇನ್ನೂ ಸ್ಪಷ್ಟವಾಗಿಲ್” ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಹೇಳಿದ್ದಾರೆ.