

ಬಂಟ್ವಾಳ: ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರ ನಿರ್ಬಂಧ ಮಾಡಿ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದರು.

ಈ ಸೇತುವೆ ಜನಸಾಮಾನ್ಯರ ಬಹುಮುಖ್ಯ ಸಂಪರ್ಕ ಕೊಂಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ಬಿರುಸಿನ ಚರ್ಚೆ ನಡೆದು ದ್ವಿಚಕ್ರ ಹಾಗು ತ್ರಿಚಕ್ರ ವಾಹನ ಸಂಚಾರಕ್ಕೆ ಅನುಮತಿ ನೀಡುವುದು ಹಾಗೂ ಎರಡೂ ಬದಿಯಲ್ಲಿ ಪೋಲಿಸರನ್ನು ನಿಲ್ಲಿಸುವ ನಿರ್ಣಯಿಸಿ ಜಿಲ್ಲಾಧಿಕಾರಿಯವರಿಗೆ ಕಳಿಸುವುದೆಂದು ತೀರ್ಮಾನಿಸಲಾಯಿತು.
ಕೊನೆಗೂ ಜನ ಆಕ್ರೋಶಕ್ಕೆ ಮಣಿದ ಪುರಸಭೆ ಅಧಿಕಾರಿಗಳು ಪುರಸಭೆ ಸದಸ್ಯ ಅಬುಬಕ್ಕರ್ ಸಿದ್ದೀಕ್ ರವರ ದೂರವಾಣಿ ಕರೆಗೆ ಸ್ಪಂದಿಸಿ ಸಂಚಾರ ಮುಕ್ತಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಇದ್ರೀಸ್ ಪಿ.ಜೆ ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು.