ಎಂ.ಆರ್.ಪಿ.ಎಲ್ ನಲ್ಲಿ ಅನಿಲ ಸೋರಿಕೆ: ಇಬ್ಬರು ಮೃತ್ಯು, ಓರ್ವ ಗಂಭೀರ; ಕೂಲಂಕುಷ ತನಿಖೆಗೆ ಎಸ್ಡಿಪಿಐ ಆಗ್ರಹ

ಎಂ.ಆರ್.ಪಿ.ಎಲ್ ನಲ್ಲಿ ಅನಿಲ ಸೋರಿಕೆ: ಇಬ್ಬರು ಮೃತ್ಯು, ಓರ್ವ ಗಂಭೀರ; ಕೂಲಂಕುಷ ತನಿಖೆಗೆ ಎಸ್ಡಿಪಿಐ ಆಗ್ರಹ
ಮಂಗಳೂರಿನ MRPL ನ ಹೆಚ್2ಎಸ್ ಘಟಕದಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಮೃತಪಟ್ಟು, ಒಬ್ಬ ಗಂಭೀರ ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಕೂಲಂಕುಷ ತನಿಖೆ ನಡೆಸುವಂತೆ ಎಸ್ಡಿಪಿಐ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ ಯವರು ಮಂಗಳೂರು ನಗರದಲ್ಲಿ ಕಾರ್ಯಾಚರಿಸುವ ಬಹುರಾಷ್ಟ್ರೀಯ ತೈಲ ಸಂಸ್ಕರಣೆ ಕಂಪೆನಿಯಾದ MRPL’ನಲ್ಲಿ ಅನಿಲ ಸೋರಿಕೆಯಾಗಿ ಕೇರಳದ ಓರ್ವ ಮತ್ತು ಉತ್ತರಪ್ರದೇಶದ ಓರ್ವ ಸೇರಿ ಒಟ್ಟು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ಉತ್ತರಪ್ರದೇಶ ಮೂಲದ ಓರ್ವನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತಕ್ಷಣ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕೂಲಂಕುಷ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು. ಮಾತ್ರ ಅಲ್ಲದೇ ಮೃತರ ಕುಟುಂಬಕ್ಕೆ ತಲಾ 50 ಲಕ್ಷ ಪರಿಹಾರ ಮತ್ತು ಗಾಯಗೊಂಡವರ ಕುಟುಂಬಕ್ಕೆ 10 ಲಕ್ಷ ಪರಿಹಾರದ ಜೊತೆಗೆ ಆತನ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಆಗ್ರಹಿದ್ದಾರೆ.
MRPL’ನಂತಹ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಈ ಹಿಂದೆಯೂ ಇಂತಹ ಘಟನೆ ನಡೆದಿದ್ದು, ಕಾರ್ಮಿಕರ ಜೀವಕ್ಕೆ ಬೆಲೆಯಿಲ್ಲದಂತಾಗಿದೆ. ಸದ್ಯ ಈ ಘಟನೆ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದು, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಂಪೆನಿ ಎಚ್ಚರಿಕೆ ಪಾಲಿಸಬೇಕು ಮತ್ತು ಸರ್ಕಾರ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಕ್ರಮ ಜರುಗಿಸಬೇಕೆಂದು ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಜಲೀಲ್ ಕೆ. ಅವರು ಪತ್ರಿಕಾ ಹೇಳಿಕೆ ಮೂಲಕ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
