April 19, 2025
IMG-20240812-WA0035

ವಿಟ್ಲ | ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ
ವಿಟ್ಲ: ಖಾಸಗಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಸ್ಥಳೀಯ ನಿವಾಸಿ ಮುಝಮ್ಮಿಲ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಟ್ಲದಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಮೆದು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯುಂಟಾಗಿದೆ.