ಮುಂಬೈ, ಅಕ್ಟೋಬರ್ 12: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಬಣದ ಎನ್ಸಿಪಿ ಹಿರಿಯ ನಾಯಕ ಬಾಬಾ ಸಿದ್ದಿಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವಂತಹ ಘಟನೆ ಮುಂಬೈನ ಬಾಂದ್ರಾ ಪಶ್ಚಿಮ ಭಾಗದಲ್ಲಿ ನಡೆದಿದೆ. ಎದೆ, ಹೊಟ್ಟೆ ಭಾಗಕ್ಕೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಇದರಿಂದ ಗಂಭೀರ ಗಾಯಗೊಂಡಿದ್ದ ಸಿದ್ದಿಕಿರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಲೀಲಾವತಿ ಆಸ್ಪತ್ರೆಯಲ್ಲಿ ಕೊನೆಯುರಿಸೆಳೆದಿದ್ದಾರೆ.
ಪಟಾಕಿ ಸಿಡಿಸುತ್ತಿದ್ದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ಮಾಡಿ ಹತ್ಯೆಗೈಯಲಾಗಿದೆ. ಬಾಬಾ ಸಿದ್ದಿಕಿ ಕಚೇರಿ ಸಮೀಪದ ರಾಮಮಂದಿರ ಬಳಿಯೇ ಕೃತ್ಯವೆಸಗಲಾಗಿದೆ. ಸದ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.