April 17, 2025
03-1438578106-health-benefits-of-pista-1614337144

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಮಗು ಒಂದು ಮೃತಪಟ್ಟ ಘಟನೆ
ಕಾಸರಗೋಡಿನ ಕುಂಬಳೆ ಯಲ್ಲಿ ನಡೆದಿದೆ.

ಕುಂಬಳೆ ಭಾಸ್ಕರ ನಗರದ ಅನಸ್ (2) ಮೃತ ಮಗು.

ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.

ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.