December 23, 2024
IMG-20240813-WA0009


ಮಂಗಳೂರು: ದೆಹಲಿಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ದ.ಕ. ಜಿಲ್ಲೆಯ ಪೆರುವಾಯಿ ಗ್ರಾಮ ಪಂ. ಅಧ್ಯಕ್ಷೆ ನೆಫೀಸಾ ಅವರನ್ನು ಆಯ್ಕೆ ಮಾಡಲಾಗಿದೆ.
ದೆಹಲಿಯ ಕೆಂಪುಕೋಟೆಯಲ್ಲಿ ಆ.15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲು ಕರ್ನಾಟಕದ 6 ಪಂಚಾಯತ್ ಮಹಿಳಾ ಅಧ್ಯಕ್ಷರನ್ನು ಆಹ್ವಾನಿಸಲಾಗಿದ್ದು, ದ.ಕ.ಜಿಲ್ಲೆಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಒಂದು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಇವರು ಹಿಂದಿನ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದರು.


ಉಪಾಧ್ಯಕ್ಷರಾಗಿದ್ದಾಗ ಅವರು ವಾಹನ ಚಲಾಯಿಸಿ ತ್ಯಾಜ್ಯ ಸಂಗ್ರಹಿಸಿ ವಿಶೇಷವಾಗಿ ಗುರುತಿಸಲ್ಪಟ್ಟಿದ್ದರು. ಅವರ ಈ ಸೇವೆಯನ್ನು ಗುರುತಿಸಿ ವರ್ಲ್ಡ್ ಯೂತ್ ಸ್ಕಿಲ್ ಡೇ ಅಂಗವಾಗಿ ಬೆಂಗಳೂರಿನಲ್ಲಿ ಜರಗಿದ ಸಮಾರಂಭದಲ್ಲಿ ಮುಖ್ಯಮಂತ್ರಿ ಗೌರವಿಸಿದ್ದರು.
ಪಂಚಾಯತ್ ವ್ಯಾಪ್ತಿಯ ರಸ್ತೆ, ಎಡಬ್ಲ್ಯೂಸಿ, ನರೇಗ ಇತ್ಯಾದಿ ಅಭಿವೃದ್ಧಿ ಯೋಜನೆಗಳಲ್ಲೂ ಅವರು ಶ್ರಮಿಸಿದ್ದಾರೆ.

Leave a Reply

Your email address will not be published. Required fields are marked *