

ಬಾತೀಷ್ ಪರ ಟ್ವಿಟರ್ ಅಭಿಯಾನ,
ಪುತ್ತೂರು: ಆಗಸ್ಟ್ 16 ರಿಂದ ಸೆಪ್ಟಂಬರ್ 16ರವರೆಗೆ ಕಾಂಗ್ರೆಸ್ ಯುವ ಘಟಕದ ಚುನಾವಣೆ ನಡೆಯಲಿದ್ದು ಅಭ್ಯರ್ಥಿಗಳು ತಮ್ಮ ಪ್ರಚಾರದಲ್ಲಿ ತೊಡಗಿದ್ದಾರೆ.
ಇಂದು ನಡೆದ ನಾಮಪತ್ರ ಪರಿಶೀಲನೆಯ ಸಂದರ್ಭದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನ ಪ್ರಬಲ ಆಕಾಂಕ್ಷಿಯಾಗಿದ್ದ ಬಾತೀಷ್ ಅಳಕೆಮಜಲು ರವರ ನಾಮಪತ್ರ ತಿರಸ್ಕೃತಗೊಂಡಿದ್ದು ಎಂದು ತಿಳಿದು ಬಂದಿದೆ.
NSUI ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಬಾತೀಷ್ ವಿವಿಧ ವಿದ್ಯಾರ್ಥಿ ಸಂಘಟಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಕಳೆದ ವಾರ ಅಷ್ಟೇ ನಾನು ಸ್ಪರ್ಧಿ ಮಾಡುವುದರಿಂದ ಕೆಲವು ನಾಯಕರು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ದರು.
ಇನ್ನೂ ನಾಮಪತ್ರ ತಿರಸ್ಕೃತಗೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಟ್ವಿಟರ್ ಅಭಿಯಾನ ಶುರುವಾಗಿದೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಚರ್ಚೆಯಾಗುತ್ತಿದ್ದು ಪಕ್ಷದ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.