‘ರಾ.ಹೆ ಕೂಡಲೇ ಎಚ್ಚೆತ್ತುಕೊಂಡು ತಾತ್ಕಾಲಿಕ ದುರಸ್ತಿ ಕಾರ್ಯ ಮಾಡಬೇಕು’
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಪಡೀಲ್ ರೈಲ್ವೆ ಅಂಡರ್ ಪಾಸ್ ಬಳಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದು ಅದರಲ್ಲಿ ಮೊಳಕಾಲವರೆಗೆ ಚರಂಡಿ ನೀರು ಸಂಗ್ರಹವಾಗಿದ್ದು, ವಾಹನ ಸವಾರರು ಎಷ್ಟೋ ಬಾರಿ ಕೈ ಕಾಲು ಮುರಿದುಕೊಂಡ ಘಟನೆಗಳು ವರದಿಯಾಗುತ್ತಾಲೇ ಇವೆ.
ಆ ರಸ್ತೆಯಲ್ಲಿ ಪ್ರತಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದರು ಸಂಬಂಧಿಸಿದ ಅಧಿಕಾರಿಗಳು ಮಾತ್ರ ರಸ್ತೆ ದುರಸ್ತಿಗೆ ಮುಂದಾಗುತ್ತಿಲ್ಲ. ಈಗಾಗಲೇ ಹತ್ತಾರು ವಾಹನ ಗುಂಡಿಯಲ್ಲಿ ಬಿದ್ದಿದ್ದು, ಸವಾರರು ಕೈ ಕಾಲು ಕೆತ್ತಿಕೊಂಡ ಉದಾಹರಣೆಗಳು ಬಹಳಷ್ಟಿವೆ. ಇನ್ನೂ ಕೆಲವು ದಿನ ಬಿಟ್ಟರೆ ಬಹುತೇಕ ಪ್ರಯಾಣಿಕರು ಅಥವಾ ವಾಹನ ಸವಾರರು ಆ ಗುಂಡಿಗಳಲಿ ಬಿದ್ದು ಪ್ರಾಣ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ರಾತ್ರಿ ಹೊತ್ತಿನಲ್ಲಿ ಸರಿಯಾಗಿ ರಸ್ತೆ ಕಾಣಲ್ಲ. ಅಲ್ಲದೆ ಆ ರಸ್ತೆಗೆ ಹೊಸದಾಗಿ ಯಾರಾದರೂ ವಾಹನ ಸವಾರರು ಬಂದರೆ ಗುಂಡಿಗಳ ಆಳ ತಿಳಿಯದೇ ಗುಂಡಿಯಲ್ಲಿ ಬೀಳಬಹುದಾಗಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆಯವರು ಗುಂಡಿಯನ್ನು ಮುಚ್ಚಿ ಅನಾಹುತವನ್ನು ತಪ್ಪಿಸಬೇಕು ಎಂಬುವುದು ನಾಗರಿಕರ ಆಗ್ರಹವಾಗಿದೆ.