ಮುಂಬೈ :ಮಾಜಿ ಸಚಿವ ಮತ್ತು ಎನ್‌ಸಿಪಿ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕ್ ಅವರನ್ನು ಶನಿವಾರ (ಅ.12) ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದು,ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಲ್ಮಾನ್ ಖಾನ್ ಸ್ನೇಹಿತರನ್ನೇ ಟಾರ್ಗೆಟ್ ಮಾಡಲಾಗ್ತಿದೆ. ಸೋಶಿಯಲ್ ಮೀಡಿಯಾ ಪೋಸ್ಟ್ ಶೇರ್ ಮಾಡುವ ಮೂಲಕ ಬಾಬಾ ಸಿದ್ದಿಕಿ ಹತ್ಯೆಯ ಹೊಣೆಯನ್ನ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ.
ಸಲ್ಲುಗೆ ಸಹಾಯ ಮಾಡೋರನ್ನ ಬಿಡೋದಿಲ್ಲ’
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಪೋಸ್ಟ್‌ನಲ್ಲಿ ಕೆಲ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸಲ್ಮಾನ್ ಖಾನ್, “ನಮಗೆ ಈ ಯುದ್ಧ ಬೇಕಾಗಿರಲ್ಲ. ಆದ್ರೆ, ನೀನು ನಮ್ಮ ಅಣ್ಣನಿಗೆ ಕೇಡು ಮಾಡಿದ್ದೆ. ನಮಗೆ ಯಾರೊಂದಿಗೂ ದ್ವೇಷವಿಲ್ಲ, ಆದರೆ ಸಲ್ಮಾನ್ ಖಾನ್ ಮತ್ತು ದಾವೂದ್ ಗ್ಯಾಂಗ್‌ಗೆ ಸಹಾಯ ಮಾಡುವವರನ್ನು ಬಿಡೋದಿಲ್ಲ. ಯಾರಾದರೂ ನಮ್ಮ ಸಹೋದರರಿಗೆ ತೊಂದರೆ ಕೊಟ್ಟರೆ ನಾವು ಸುಮ್ಮನೆ ಇರುವುದಿಲ್ಲ,’’ ಎಂಬ ಎಚ್ಚರಿಕೆಯ ಪೋಸ್ಟ್ ಇದೀಗ ವೈರಲ್ ಆಗ್ತಿದೆ.