ಕರ್ನಾಟಕ: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಗ್ಗಿನಿಂದ ಮತದಾನ ಆರಂಭವಾಗಿದೆ. ಮತದಾರರು ಮತಗಟ್ಟೆಗಳತ್ತ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಮತದಾನಕ್ಕೂ ಮುನ್ನ ಮತಗಟ್ಟೆ ಸಿಬ್ಬಂದಿಯಿಂದ ಅಣಕು ಮತದಾನ ನಡೆಯಿತು. ಮತಯಂತ್ರಗಳು ಸರಿಯಾಗಿವೆಯೇ ಎಂದು ಪರೀಕ್ಷಿಸಲಾಯಿತು. ಮತಯಂತ್ರಗಳು ಸರಿ ಇವೆ ಎಂದು ಖಚಿತಪಡಿಸಿಕೊಂಡ ನಂತರವೇ ಸಿಬ್ಬಂದಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು.
ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಆಯಾ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜೊತೆಗೆ ಸೂಕ್ತ ಬಂದೋಬಸ್ತ್ ಮಾಡಿಕೊಂಡಿವೆ. ಮತಗಟ್ಟೆಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.