ಮಂಗಳೂರು: ರಾತ್ರಿ ಮಲಗಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆಯ ಆಸ್ಪತ್ರೆಯೊದರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಮಕ್ಕಳ ಪೈಕಿ ತಾಯಿ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.
ಮೃತರನ್ನು ಮಂಜನಾಡಿಯ ಕಲ್ಕಟ್ಟ ನಿವಾಸಿ ಕುಬ್ರಾ ಎಂದು ಗುರುತಿಸಲಾಗಿದೆ.
ಡಿಸೆಂಬರ್ 7ರಂದು ರಾತ್ರಿ ಮನೆಯಲ್ಲಿ ತಾಯಿ ಮತ್ತು ಮೂವರು ಹೆಣ್ಮಕ್ಕಳು ಮಲಗಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಮನೆಯವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮಕ್ಕಳ ತಾಯಿ ಕುಬ್ರಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.