March 22, 2026
untitled-design-51-68811056ed706

ಮಂಗಳೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರ ವಲಯದ ಪಡೀಲ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್(26) ಎಂದು ಗುರುತಿಸಲಾಗಿದೆ.

ಅವರ ಮೃತದೇಹ ಪಡೀಲ್ ಕೊಡೆಕ್ಕಲ್ ಬಳಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಕಂಕನಾಡಿ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.