March 22, 2026

ಬೆಂಗಳೂರು: ಶ್ರೀಲಂಕಾದ ಪೂರ್ವ ಕರಾವಳಿ ಹಾಗೂ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನವರಿ 13,14 ರಂದು ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಇಂದು ವರ್ಷದ ಮೊದಲ ಮಳೆ ಆರಂಭವಾಗಿದೆ.

ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಹಾಗೂ ಕಡಬ ತಾಲೂಕಿನ ವಿವಿಧೆಡೆ
ಮಂಗಳವಾರ ಸಂಜೆ ಭಾರಿ ಮಳೆಯಾಗುತ್ತಿದೆ. ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.