March 14, 2026
images

ಪಾಣೆಮಂಗಳೂರು, ಮಾರ್ಚ್ 14: ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ನಡೆಯಲಿರುವ ಸೌಹಾರ್ದ ಇಫ್ತಾರ್ ಕೂಟಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಮಾರ್ಚ್ 14ರಂದು ಸಂಜೆ 5:30ಕ್ಕೆ ಪಾಣೆಮಂಗಳೂರು ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ.

ಮಂಗಳೂರು ಶಾಂತಿ ಪ್ರಕಾಶನದ ಅಧ್ಯಕ್ಷ ಮುಹಮ್ಮದ್ ಕುಂಞ, ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ, ಬಂಟ್ವಾಳ ವಲಯ ಪ್ರಧಾನ ಧರ್ಮಗುರು ಫಾ. ಜ್ಯಾಕ್ ವಿಕ್ಟರ್ ಡಿಸೋಜ, ನೆಹರೂ ನಗರ ಮಸೀದಿ ಖತೀಬ್ ದಾವೂದ್ ಇಸ್ಮಾಯಿಲ್ ಫೈಝಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಮಾನಾಥ ರೈ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಸೌಹಾರ್ದ ಮತ್ತು ಸಮನ್ವಯದ ಸಂದೇಶ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.