March 22, 2026
IMG-20240814-WA0074

ಮಂಗಳೂರು: ರೌಡಿ ಶೀಟರ್ ಕಡಪ್ಪರ ಸಮೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
ಸುರತ್ಕಲ್ ಕೃಷ್ಣಾಪುರದ ಮುಹಮ್ಮದ್ ನೌಶಾದ್, ಕಿನ್ಯ ನಿವಾಸಿ ನಿಯಾಝ್, ಬಜಾಲ್ ಶಾಂತಿನಗರದ ತನ್ವೀರ್ ಯಾನೆ ತನ್ನು ಮತ್ತು ಕಾಪು ಮಜೂರಿನ ಮುಹಮ್ಮದ್ ಇಕ್ಬಾಲ್ ಯಾನೆ ಇಕ್ಕು ಬಂಧಿತ ಆರೋಪಿಗಳು.
ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ.