ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಮುಂದುವರಿದಿದೆ. ಇಂದು (ಗುರುವಾರ) ಮುಂಜಾನೆ AQI 452ರ ಗಡಿ ದಾಟಿದ್ದು ದಟ್ಟಮಂಜಿನಂತಹ ಹೊಗೆ ಆಚರಿಸಿಕೊಂಡಿತ್ತು. ಫ್ಲೈಟ್‌ರಾಡಾರ್ ಪ್ರಕಾರ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೋಚರತೆ ಕಡಿಮೆಯಾಗಿದೆ, ಇದರಿಂದಾಗಿ 300 ಅಧಿಕ ವಿಮಾನಗಳು ವಿಳಂಬವಾಗಿವೆ.
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ರಾಜಧಾನಿ ಪ್ರದೇಶದ ಹಲವಾರು ಪ್ರದೇಶಗಳಲ್ಲಿ AQI 450 ಕ್ಕಿಂತ ಹೆಚ್ಚು ದಾಖಲಾಗಿದೆ. ಆನಂದ್ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್ಪುರಿ, ಮುಂಡ್ಕಾ, ನಜಾಫ್ಗಢ್, ಲಜಪತ್ ನಗರ, ಪಟ್ಪರ್ಗಂಜ್, ಪಂಜಾಬಿ ಬಾಗ್, ಆರ್‌ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್, ಮತ್ತು ವಜೀರ್‌ಪುರ ದೆಹಲಿಯ ಹಲವಾರು ಪ್ರದೇಶಗಳಲ್ಲಿ ಸೇರಿವೆ.
ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಕುರಿತು ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಅತಿಶಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ನಾವು ಕರ್ತವ್ಯ ಪಥದಲ್ಲಿ ನಿಂತಿದ್ದೇವೆ ಇಲ್ಲಿ AQI 474 ತಲುಪಿದೆ. ನಮಗೆ ಇಂಡಿಯಾ ಗೇಟ್ ಅನ್ನು ಸಹ ನೋಡಲಾಗುತ್ತಿಲ್ಲ, ಎಎಪಿ ಸರ್ಕಾರದ ಅಸಮರ್ಥತೆ ಇದಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದರು.