

ಚಿತ್ರದುರ್ಗ :ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪ ಇಂದು ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಸಭಾಧ್ಯಕ್ಷ ಯು ಟಿ ಖಾದರ್ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುವಾಗ ಈ ಅಪಘಾತ ನಡೆದಿದ್ದು ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ರುದ್ರಪ್ಪ ಲಮಾಣಿ ರವರು ಅಪಾಯದಿಂದ ಪಾರಾಗಿದ್ದು ಶೀಘ್ರ ಗುಣಮುಖರಾಗಲಿ ಎಂದು ಸಭಾಧ್ಯಕ್ಷ
ಯು ಟಿ ಖಾದರ್ ತಿಳಿಸಿದರು.