ಕೆಂಪುಕೋಟೆಯಲ್ಲಿ ರಾರಾಜಿಸಿದ ತಿರಂಗಾ
ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಇಂದು ದೇಶಕ್ಕಾಗಿ ತ್ಯಾಗ ಮಾಡಿದ ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ದಿನ. ಈ ದೇಶ ಅವರಿಗೆ ಋಣಿಯಾಗಿದೆ ಎಂದು ಪ್ರಧಾನಿ ಮೋದಿ ಅವರು ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು.
ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ
ಮುಂದುವರಿದು ಮಾತನಾಡಿದ ಅವರು, ಈ ವರ್ಷ ಮತ್ತು ಕಳೆದ ಕೆಲವು ವರ್ಷಗಳಿಂದ, ನೈಸರ್ಗಿಕ ವಿಕೋಪದಿಂದಾಗಿ, ನಮ್ಮ ಕಳವಳಗಳು ಹೆಚ್ಚುತ್ತಿವೆ. ಈ ನೈಸರ್ಗಿಕ ವಿಕೋಪದಿಂದ ಹಲವಾರು ಜನರು ತಮ್ಮ ಕುಟುಂಬ ಸದಸ್ಯರನ್ನು, ಆಸ್ತಿಯನ್ನು ಕಳೆದುಕೊಂಡಿದ್ದಾರೆ, ರಾಷ್ಟ್ರವೂ ನಷ್ಟ ಅನುಭವಿಸಿದೆ. ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ ನಿಲ್ಲುತ್ತದೆ ಎಂದು ಅವರಿಗೆ ಭರವಸೆ ನೀಡುತ್ತೇನೆ ಎಂದರು.