December 21, 2024
election-commission-officials-152337472-16x9_0

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಇಂದು (ಅಕ್ಟೋಬರ್ 15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು.

ಇದೇ ವೇಳೆ ಕರ್ನಾಟಕದ ಶಿಗ್ಗಾಂವಿ(ಹಾವೇರಿ), ಚನ್ನಪಟ್ಟಣ)ರಾಮನಗರ) ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಇನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

Leave a Reply

Your email address will not be published. Required fields are marked *