March 27, 2026
IMG-20251115-WA0002

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡ್ ಬಳಿ ನಿಯಂತ್ರಣ ತಪ್ಪಿದ ಕಾರೊಂದು ನಾರಾಯಣ ಗುರು ವೃತ್ತಕ್ಕೆ ಡಿಕ್ಕಿಯಾಗಿ ಮೂವರು ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಮೃತರನ್ನು ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ(23) ಎಂದು ಗುರುತಿಸಲಾಗಿದೆ. ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಂಬಂಧಿಕಾರಾಗಿದ್ದ 9ಮಂದಿಯ ತಂಡವೊಂದು ಇನ್ನೋವಾ ಕಾರಿನಲ್ಲಿ ಬೆಂಗಳೂರಿನಿಂದ‌ ಉಡುಪಿ ಕಡೆ ತೆರಳುತ್ತಿತ್ತು. ಬಂಟ್ವಾಳ ತಾಲೂಕಿನ ಬಿಸಿರೋಡ್ ಬಳಿ ನಿಯಂತ್ರಣ ಕಳೆದುಕೊಂಡ ಕಾರು ನಾರಾಯಣ ಗುರು ವೃತ್ತಕ್ಕೆ ಡಿಕ್ಕಿಹೊಡೆಯಿತೆನ್ನಲಾಗಿದೆ.‌

ಘಟನೆಯಿಂದ ರವಿ (64), ನಂಜಮ್ಮ (75), ರಮ್ಯಾ(23) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ 6 ಮಂದಿ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.