ಏ.18 ರಂದು ವಕ್ಫ್ ಕಾಯ್ದೆ ವಿರುದ್ಧ ಉಲಮಾ ಒಕ್ಕೂಟದ ಪ್ರತಿಭಟನೆಯ ಯಶಸ್ಸಿಗೆ ಮೊಯ್ದೀನ್ ಬಾವ ಕರೆ

ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18ರಂದು ಶುಕ್ರವಾರ ಮಂಗಳೂರಿನ ಅಡ್ಯಾರ್ ಕಣ್ಣೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯನ್ನು ಯಶಸ್ವಿಗೊಳಿಸುವಂತೆ ಮಾಜಿ ಶಾಸಕ ಮೊಯ್ದೀನ್ ಬಾವ ಕರೆ ನೀಡಿದ್ದಾರೆ.
ಭಾರತದ ಸಂವಿಧಾನದಲ್ಲಿರುವ ತತ್ವಗಳು, ನಿಬಂಧನೆಗಳ ಮೇಲೆ ಮೋದಿ ಸರ್ಕಾರದ ದಾಳಿ ಮಾಡುತ್ತಿದೆ. ಅದನ್ನು ಖಂಡಿತವಾಗಿ ವಿರೋಧಿಸುತ್ತೇವೆ ಎಂದು ಹೇಳಿದರು.
ತಲೆತಲಾಂತರಗಳಿಂದ ಮುಸ್ಲಿಮರು ರಕ್ಷಿಸಿಕೊಂಡು ಬರುತ್ತಿರುವ ವಕ್ಫ್ ಸೊತ್ತುಗಳನ್ನು ಕಬಳಿಸುವ ಹುನ್ನಾರವನ್ನು ಹೊಂದಿರುವ ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಮುಸ್ಲಿಮರು ಸಾರಾಸಗಟವಾಗಿ ತಿರಸ್ಕರಿಸಿದ್ದಾರೆ ಎಂದರು.
