ಪುತ್ತೂರು: ಕೋಮುದ್ವೇಷದ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಭರತ್ ಕುಮ್ಡೇಲು ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ .

ಪುತ್ತೂರಿನಲ್ಲಿ ಇತ್ತೀಚೆಗೆ ಹತ್ಯೆಯಾದ ರೌಡಿ ಶೀಟರ್ ಸುಹಾಸ್ ಶೆಟ್ಟಿಗೆ ನುಡಿನಮನ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಿದ್ದ ಭರತ್ ಕುಮ್ಡೇಲು ಕೋಮುದ್ವೇಷವನ್ನು ಉಂಟುಮಾಡುವಂತಹ ಭಾಷಣವನ್ನು ಮಾಡಿದ್ದು, ಆರೋಪಿಯ ಮಾತುಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುವಂತಹ ಸಾಧ್ಯತೆಗಳಿವೆ ಎಂದು ಆರೋಪಿಸಿ ಪುತ್ತೂರು ನಗರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.
ಆರೋಪಿತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
