ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ , ರೆಡ್ ಅಲರ್ಟ್ ಘೋಷಣೆಯಾಗಿದೆ.

ಇದರ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜೂನ್ 16 (ಇಂದು) ಸೋಮವಾರ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ತರಗತಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಭಾನುವಾರ ರಾತ್ರಿ ಜಿಲ್ಲೆಯ ಐದು ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಮಳೆ ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶ ಪರಿಷ್ಕರಿಸಿದ್ದು ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ ಘೋಷಣೆ ಮಾಡಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ವಿವಿಧ ಮಳೆ ಸಂಬಂಧಿತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
