ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಗೆ ಅಧೀಕಾರೇತರ ಸದಸ್ಯರಾಗಿ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮ ಪಂಚಾಯಿತಿ ಸದಸ್ಯರಾದ ಮಹಮ್ಮದ್ ರಿಯಾಝ್ ರವರನ್ನು ನೇಮಕ ಮಾಡಲಾಗಿದೆ.
ಯುವ ಕಾಂಗ್ರೆಸ್ ಸಮಿತಿಯಲ್ಲಿ ಗುರುತಿಸಿಕೊಂಡಿರುವ ಇವರು ಪ್ರಸ್ತುತ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಗೆ ಅಧೀಕಾರೇತರ ಸದಸ್ಯರನ್ನ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಪದ್ಮ ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.