ಮಂಗಳೂರು: ತಾನು ಮಹಿಳಾ ಪರ ಹೋರಾಟಗಾರ್ತಿಯಾಗಿಯೇ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದು. ಇಲ್ಲಿಯೂ ಮಹಿಳಾ ಮೀಸಲಾತಿಯನ್ನು ಅನುಷ್ಠಾನಕ್ಕೆ ತರುವಲ್ಲಿ ಶ್ರಮಿಸುವೆ. ಪುರುಷ ಪ್ರಧಾನ ಸಮಾಜದಲ್ಲಿ ಸಾಕಷ್ಟು ಸ್ಪರ್ಧೆಗಳಿದ್ದರೂ ಮಹಿಳೆಯರಲ್ಲಿ ಸಾಧಿಸುವ ಛಲ ಇರಬೇಕು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನ ರಾಜ್ಯ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿಕೆ ನೀಡಿದರು.ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹಿಳಾ ಸದಸ್ಯತ್ವ ನೋಂದಣಿ ಹಾಗೂ ಮಹಿಳಾ ಸನ್ಮಾನ ಸಮಾರಂಭ ಕಾರ್ಯಕ್ರಮ ಭಾಗವಹಿಸಿ ಅವರು ಮಾತನಾಡಿದರು.ಕರ್ನಾಟಕ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವಲ್ಲಿ ಸಫಲವಾಗಿದೆ. ಅದೇ ರೀತಿ ಮಹಿಳೆಯರು ಜೀವನದಲ್ಲಿ ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆಯುವಲ್ಲಿ ಪ್ರಯತ್ನಿಸಿ ಸಫಲರಾಗಬೇಕು ಎಂದು ಅವರು ಕರೆ ನೀಡಿದರು.ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಹಿಳಾ ಕಾಂಗ್ರೆಸ್ ಉಸ್ತುವಾರಿಗಳಾದ ಶ್ರೀ ಮಂಜುನಾಥ್ ಭಂಡಾರಿಯವರು ಮಹಿಳೆಯರು ಸಂಘಟನಾತ್ಮಕವಾಗಿ ಕೆಲಸ ಮಾಡಿದಾಗ ಮಾತ್ರ ಮಹಿಳಾ ನಾಯಕತ್ವ ಬೆಳೆಯುವುದು. ಮಹಿಳೆಯರು ತಮ್ಮ ಸ್ವಪ್ರಯತ್ನದಿಂದ ರಾಜಕೀಯದಲ್ಲಿ ಮುಂದೆ ಬರಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ಪದ್ಮರಾಜ್ ಆರ್. ಪೂಜಾರಿ, ಹರೀಶ್ ಕುಮಾರ್ ಸೇರಿದಂತೆ ಹಲವು ನಾಯಕರು, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.