ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
ಮಂಗಳೂರು: ಕಲ್ಕತ್ತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ನಗರದ ಭಾರತೀಯ ವೈದ್ಯಕೀಯ ಸಂಘ, ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ನಗರ ಐಎಂಎ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ ಶಾಂತಿಯತ ಮೆರವಣಿಗೆ ನಡೆಯಿತು.
ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ಸಹಿತ, ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಭಾಗವಹಿಸಿದ್ದರು.