ಮಂಗಳೂರು : ಸ್ವಾತಂತ್ರ್ಯ ದಿನಾಚರಣೆ ವೇಳೆ ಗಾಂಧಿಜೀ ಮತ್ತು ಸ್ವಾತಂತ್ರ ಹೋರಾಟಗಾರರನ್ನು ಅಪಮಾನಿಸುವ ರೀತಿಯಲ್ಲಿ ಮಾತನಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದೇಶದ್ರೋಹದ ಕೃತ್ಯ ಎಸಗಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದರು.ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸುವುದು ದೇಶದ್ರೋಹದ ಕೆಲಸ ಎಂದರು.ಒಬ್ಬ ಚುನಾಯಿತ ಜನಪ್ರತಿನಿಧಿ ಸರಕಾರಿ ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಗಾಂಧಿಜೀಗೆ ಅಪಮಾನ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.