March 22, 2026
IMG-20260118-WA0007

ಬಂಟ್ವಾಳ : ವಿಧಾನ ಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಜೀಪ ಮುಡಾ ವಲಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷರಿಗೆ ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸಿನ ಮೇರೆಗೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಚಂದ್ರಶೇಖರ ಭಂಡಾರಿ ನೇಮಕಾತಿ ಆದೇಶ ಪತ್ರ ನೀಡಿದ್ದಾರೆ.

ಹಲವಾರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಸಜೀಪ ಮುಡಾ ವಲಯ ಕಾಂಗ್ರೆಸ್ ನ ಅಧ್ಯಕ್ಷ ಎನ್ ಕರೀಂ ಉಪಸ್ಥಿತರಿದ್ದರು.