ನವದೆಹಲಿ: ಮುಸ್ಲಿಮರಿಗೆ ಏಕರೂಪ ಅಥವಾ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಷರಿಯಾ ಕಾನೂನಿನೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.ಪ್ರಧಾನ ಮಂತ್ರಿಗಳು ಜಾತ್ಯತೀತ ನಾಗರಿಕ ಸಂಹಿತೆಗಾಗಿ ಕರೆ ನೀಡಿರುವುದನ್ನು ಪರಿಗಣಿಸುತ್ತದೆ. ಆದರೆ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದು ಅತ್ಯಂತ ಆಕ್ಷೇಪಾರ್ಹವಾಗಿದೆ ಎಂದು ಮಂಡಳಿ ತಿಳಿಸಿದೆ.