December 21, 2024
Screenshot_20241018_212450_Instagram

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿವೇಶನದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸ್ಪೀಕರ್​​ ಯು.ಟಿ.ಖಾದರ್ ಹೇಳಿದ್ದಾರೆ.

ನಗರದ ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಇನ್ನಷ್ಟು ಚೆನ್ನಾಗಿ ಅಧಿವೇಶನ ಮಾಡಲು ಸಿದ್ಧತೆ ನಡೆದಿದೆ. ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಒತ್ತು ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಜನಪ್ರತಿನಿಧಿಗಳಿಗೆ ಮಾತ್ರ ವಿಧಾನಸೌಧ ಅಲ್ಲಾ. ಈ ಭಾಗದ ಜನರಿಗೂ ನಮ್ಮ ವಿಧಾನಸೌಧ ಅನ್ನೋ ಭಾವನೆ ಮೂಡಬೇಕು. ಹೀಗಾಗಿ ಸುವರ್ಣ ವಿಧಾನಸೌಧಕ್ಕೆ ಎಲ್ಲರೂ ಬರಬೇಕು. ಸುಲಭದಲ್ಲಿ ಪಾಸ್ ಸಿಗುವ ವ್ಯವಸ್ಥೆ ಮಾಡುತ್ತೇವೆ. ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನೂ ಕರೆದುಕೊಂಡು ಬರವ ವ್ಯವಸ್ಥೆ ಕೂಡ ಇದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *