December 23, 2024
Screenshot_20241118_120918_Google

ಮಂಗಳೂರು: ನಗರದ ಹೊರವಲಯದ ಉಳ್ಳಾಲದ ಬೀಚ್ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣ ಸಂಬಂಧಿಸಿದಂತೆ ಸಾಯಿರಾಮ್ ವಾಝ್ಕೊ ಬೀಚ್‌ ರೆಸಾರ್ಟ್ ನ ಮಾಲಕ ಮನೋಹರ್ ಮತ್ತು ಮ್ಯಾನೇಜರ್ ಭರತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಇವರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೈಸೂರು ಕುರುಬಾರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೃತ ಯುವತಿಯರು.

ಮೂವರು ಯುವತಿಯರ ಸಾವಿಗೆ ಬೀಚ್‌ ರೆಸಾರ್ಟ್ ನ ಬೇಜವಾಬ್ದಾರಿಯೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದರು. ಈ ನಿಟ್ಟಿನಲ್ಲಿ ರೆಸಾರ್ಟ್ ಗೆ ಬೀಗ ಜಡಿಯಲಾಗಿತ್ತು.
ಅಲ್ಲದೇ ರೆಸಾರ್ಟ್ ನ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿತ್ತು.

ಶನಿವಾರ ಬೀಚ್‌ ರೆಸಾರ್ಟ್ ನಲ್ಲಿ ಕೊಠಡಿ ಪಡೆದಿದ್ದ ಮೂವರು ಯುವತಿಯರು ರವಿವಾರ ಬೆಳಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ ನಲ್ಲಿ ಈಜಲು ತೆರಳಿದ್ದರು. ಈ ವೇಳೆ ಓರ್ವ ಯುವತಿ ಮಳುಗಿದ್ದು, ಉಳಿದವರು ರಕ್ಷಿಸಲು ಹೋದಾಗ ಈ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.

Leave a Reply

Your email address will not be published. Required fields are marked *