ಬ್ರಿಸ್ಬೇನ್, ಆಸ್ಟ್ರೇಲಿಯಾ: ಭಾರತದ ಅನುಭವಿ ಸ್ಟಾರ್ ಸ್ಪಿನ್ ಬೌಲರ್ ಆರ್. ಅಶ್ವಿನ್ ಅವರು ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಣೆ ಮಾಡಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಗವಾಸ್ಕರ್ ಬಾರ್ಡರ್ ಟ್ರೋಫಿಯ ಮೂರನೇ ಟೆಸ್ಟ್ ಡ್ರಾನಲ್ಲಿ ಕೊನೆಗೊಂಡ ಬೆನ್ನಲ್ಲೇ ಅಶ್ವಿನ್ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.ಆರ್. ಅಶ್ವಿನ್ ಭಾರತದ ಪರ 106 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 24ರ ಸರಾಸರಿಯಲ್ಲಿ 537 ವಿಕೆಟ್ ಕಬಳಿಸಿದ್ದಾರೆ. ಜೊತೆಗೆ, 6 ಶತಕ ಹಾಗೂ 14 ಅರ್ಧಶತಕಗಳನ್ನು ಬಾರಿಸಿ ಬ್ಯಾಟಿಂಗ್ನಲ್ಲೂ ಮಿಂಚಿದ್ದಾರೆ. ಅಲ್ಲದೇ, 116 ಏಕದಿನ ಹಾಗೂ 65 ಟಿ-20 ಪಂದ್ಯಗಳಲ್ಲೂ ಕೂಡ ಅವರು ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.