February 4, 2026
bengaluru_Rain_13

ಬೆಂಗಳೂರು: ಭಾನುವಾರ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ಬೆಂಗಳೂರು ನಗರದಾದ್ಯಂತ ದಾಖಲೆಯ ಮಳೆಯಾಗಿದೆ.

ರಾತ್ರಿಯಿಂದ ಬೆಳಗ್ಗೆ 5:30ರವರೆಗೆ ನಗರ ವ್ಯಾಪ್ತಿಯಲ್ಲಿ 104 ಮಿ.ಮೀ ಮಳೆಯಾಗಿದೆ. ಕಳೆದ 10 ವರ್ಷದಲ್ಲಿ ಮೇ ತಿಂಗಳಲ್ಲಿ ದಾಖಲಾದ ಅತಿಹೆಚ್ಚು ಮಳೆ ಇದಾಗಿದೆ. ಭಾರೀ ಮಳೆಗೆ ರಸ್ತೆಗಳಲ್ಲಿ ನೀರು ನಿಂತಿದೆ. ಅಲ್ಲದೇ ನಗರದ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.