May 20, 2026
IMG-20260519-WA0038

ಉಳ್ಳಾಲ, ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಯಿಂದ ಕಷ್ಟಪಟ್ಟು ಕಲಿತು ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಿದೆ. ಸೋರಿಕೆ ಮಾಡಿವರ ವಿರುದ್ಧ ಕ್ರಮ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದರಿಂದ ತೊಂದರೆ ಗೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ ಹೇಳಿದರು

ಅವರು ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಎನ್ ಎಸ್ ಯುಐ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ತೊಕ್ಕೊಟ್ಟು ಫ್ಲೈಓವರ್ ಬಳಿ ಕೇಂದ್ರ ಸರ್ಕಾರ ವಿರುದ್ಧ ನಡೆದ ಬೃಹತ್ ಪ್ರತಿಭಟನೆ ಯಲ್ಲಿ ಮಾತನಾಡಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಯಾದ ಘಟನೆ ನಡೆದರೂ ಮೌನವಾಗಿರುವ ಕೇಂದ್ರ ಸರ್ಕಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಎನ್ ಎಸ್ ಯುಐ ಜಿಲ್ಲಾ ಧ್ಯಕ್ಷ ಸುಹಾನ್ ಆಳ್ವ ಮಾತನಾಡಿ, ನೀಟ್ ಪರೀಕ್ಷೆ ಪದೇ ಪದೇ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುತ್ತಿದ್ದಾರೆ.ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಸುಮಾರು 40 ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ.‌ಇದರಿಂದ ಬಹಳಷ್ಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ವಿಧಾನಸಭಾ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಯುಟಿ ಫರೀದ್ ಮಾತನಾಡಿ ಪ್ರಶ್ನೆ ಪತ್ರಿಕೆ ಸೋರಿಕೆ ಯಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ಕೆಲಸ ಆಗಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಮುಖಂಡ ರಾದ ದಿನೇಶ್ ಕುಂಪಲ , ಮೋನು ಮಲಾರ್, ಅಮಿತಾ , ಆಳ್ವಿನ್ ಡಿಸೋಜ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾದ ಆಳ್ವಿನ್ ಡಿಸೋಜ, ಉಸ್ಮಾನ್ ಕಲ್ಲಾಪು, ರಝಿಯಾ ಇಬ್ರಾಹೀಮ್, ಮುಹಮ್ಮದ್ ಮೋನು ಮಲಾರ್, ಮನ್ಸೂರ್ ಮಂಚಿಲ,ಶಾಹಿಲ್ ಮಂಚಿ, ಫಿರೋಝ್ ಮಲಾರ್, ಮುರಳೀಧರ ಶೆಟ್ಟಿ, ಆಸೀಫ್ ಪೆರಿಮಾರ್, ದಿನೇಶ್ ರೈ,ನವಾಝ್ ನರಿಂಗಾನ, ತ್ವಾಹೀ ಕಲ್ಲಾಪು,ಝಕರಿಯಾ ಮಲಾರ್, ದಿನೇಶ್ ಕುಂಪಲ, ಮಿತೇಶ್, ಬಾಜಿಲ್ ಡಿ ಸೋಜ ಮತ್ತಿತರರು ಉಪಸ್ಥಿತರಿದ್ದರು.