

ಬೆಂಗಳೂರು : ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಫೋಟೋ ಜರ್ನಲಿಸ್ಟ್ ರವರ ವತಿಯಿಂದ ಆಯೋಜಿಸಲಾಗಿದ್ದ ಫೋಟೋ ಎಕ್ಸಿಬಿಷನ್ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ನಾನು ಯಾವ ತಪ್ಪನ್ನೂ ಎಸಗಿಲ್ಲರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ.
ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಶ್ರೀ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ. ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ ಎಂದರು.