May 6, 2025
IMG-20240819-WA0020

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲೆಸದ ಪ್ರಕರಣ ಸಂಬಂಧ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಶಾಹುಲ್ ಹಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಯನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳನ್ನು ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.