

ಮಂಗಳೂರು: ಮುಡಾ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮತ್ತೊಂದೆಡೆ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ನಾಳೆ ನಡೆಯಬೇಕಿದ್ದ ವಿಚಾರಣೆಯಿಂದ ಸಿದ್ದರಾಮಯ್ಯಗೆ ರಿಲೀಫ್ ಸಿಕ್ಕಿದೆ.
