ಬಂಟ್ವಾಳ: ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಕ್ಕೆ ಸಂಬಂಧಿಸಿ ಇಂದು ಕಾಂಗ್ರೆಸ್ ವತಿಯಿಂದ ರಾಜ್ಯದಲ್ಲಿ ಪ್ರತಿಭಟನೆ ನಡೆಸಿದರು.
ಇಂದು ಮಾಜಿ ಸಚಿವ ರಮಾನಾಥ ರೈ ರವರ ನೇತೃತ್ವದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪೊಳಲಿ ಕೈಕಂಬ ದ್ವಾರದಿಂದ ಬಂಟ್ವಾಳ ಮಿನಿ ವಿಧಾನಸೌಧ ವರಗೆ ಪಾದಯಾತ್ರೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ನಾಯಕರು ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಬಿ ಸಿ ರೋಡ್ ಜಂಕ್ಷನ್ ಬಳಿ ಟಯರ್ ಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು