ಮಂಗಳೂರು, ಸೆ. 19: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇವರು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯರಾಗಿದ್ದಾರೆ.
ಇನ್ನೂ ಅತಿಹೆಚ್ಚು ಮತ ಪಡೆದ ಭಾನುಮತಿ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಪಾಲಿಕೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14, ಎಸ್ಡಿಪಿಐ ಇಬ್ಬರು ಸದಸ್ಯ ಬಲವನ್ನು ಹೊಂದಿದೆ. ಚುನಾವಣೆಯಲ್ಲಿ ಸಂಸದ, ಶಾಸಕರು ಸೇರಿ 65 ಮಂದಿ ಚುನಾವಣೆಯಲ್ಲಿ ಮತ ಚಲಾಯಿಸಬಹುದಾಗಿತ್ತು.