ಕಡಬ: ಅಲಿ ಬನಾತ್ ಚಾರಿಟೇಬಲ್ ಟ್ರಸ್ಟ್ (ರಿ) ಪೋರಂತ್, ಕಡಬ ಇದರ ಆಶ್ರಯದಲ್ಲಿ ಸಂಸ್ಥೆಯ ಕಚೇರಿ ಉದ್ಘಾಟನೆ ಪ್ರಯುಕ್ತ, ಬ್ಲಡ್ ಡೋನರ್ಸ್ ಮಂಗಳೂರು (ರಿ) ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಇದೇ ಬರುವ ಜೂನ್ 07, 2026ರ ಆದಿತ್ಯವಾರ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಕಡಬದ ಎ. ಕೆ ಟವರ್‌ನಲ್ಲಿ ಈ ಶಿಬಿರವು ನಡೆಯಲಿದೆ.
ಸಾರ್ವಜನಿಕರು ಹಾಗೂ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಈ ಜೀವದಾನದ ಮಹತ್ಕಾರ್ಯವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
+91 8904445868,
+91 9686365513,
+91 9972925113,
+91 8152015165
