April 19, 2025
IMG-20240820-WA0047

ಮಂಗಳೂರು: ವಿದ್ಯಾರ್ಥಿಗಳನ್ನು ಅಪಹರಿಸಿ ಅರೆಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಗಳೂರು ನಗರದ ಮಹಾಕಾಳಿ ಪಡ್ಪು ಬಳಿ ನಡೆದಿದೆ.
ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಹಲ್ಲೆಗೊಳಗಾದ ವಿದ್ಯಾರ್ಥಿಗಳು.
ಬಂಧಿತರನ್ನು ದಿಯಾನ್ ಮತ್ತು ಸಲ್ಮಾನ್ ಎಂದು ಗುರುತಿಸಲಾಗಿದೆ. ಅನ್ನೈ, ತಸ್ಮಿನ್, ಅನಾಸ್ ಹಲ್ಲೆ ಮಾಡಿದ ಆರೋಪಿಗಳು.
ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರಿನ ನೆಹರು ಮೈದಾನದಲ್ಲಿ ಯೆನಪೋಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಆಗಸ್ಟ್ 14ರಂದು ಫುಟ್ಬಾಲ್ ಟೂರ್ನಮೆಂಟ್ ನಡೆದಿತ್ತು. ಈ ವೇಳೆ, ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜುನೈದ್ ಎಂಬವರು ಯೆನಪೋಯ ತಂಡಕ್ಕೆ ಬೆಂಬಲಿಸಿದ ದ್ವೇಷದಲ್ಲಿ ಮತ್ತೊಂದು ತಂಡದ ವಿದ್ಯಾರ್ಥಿಗಳು ಇವರನ್ನು ಅಪಹರಿಸಿದ್ದಾರೆ. ಆಗಸ್ಟ್ 19ರ ಸೋಮವಾರ ಸಂಜೆ ಇವರನ್ನು ಪಾಂಡೇಶ್ವರದ ಫೋರಂ ಮಾಲ್ ಬಳಿಯಿಂದ ಕಾರಿನಲ್ಲಿ ಅಪಹರಿಸಿದ್ದು ಮಹಾಕಾಳಿ ಪಡ್ಪು ಎಂಬಲ್ಲಿಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ದಿಯಾನ್, ಅನ್ನೈ, ತಸ್ಮಿನ್, ಸಲ್ಮಾನ್, ಅನಾಸ್ ಮತ್ತಿತರರು ಸೇರಿ ಹಲ್ಲೆಗೈದಿದ್ದಾಗಿ ಮೊಹಮ್ಮದ್ ಶುರೈ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.