ಪುತ್ತೂರು: ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗೆ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದ ಘಟನೆ ನಡೆದಿದ್ದು ಇದನ್ನು ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಫೀಸಾ ತೀವ್ರವಾಗಿ ಖಂಡಿಸಿದ್ದಾರೆ.
ಕಾಲೇಜು ವಿದ್ಯಾರ್ಥಿನಿ ಚೂರಿ ಇರಿತ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು. ಇದರ ಹಿಂದೆ ಇರುವ ಷಡ್ಯಂತ್ರವನ್ನು ಬಯಲಿಗೆಳಿಯಬೇಕು. ತಕ್ಷಣ ಶಿಕ್ಷಕಿಯನ್ನು ಅಮಾನತು ಗೊಳಿಸಿ ಚೂರಿ ಇರಿದ ಆರೋಪಿಯ ವಿರುದ್ಧ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.