


ಮಂಗಳೂರು: ಕಡಬ ಪಟ್ಟಣ ಪಂಚಾಯಿತಿಯ 13 ವಾರ್ಡ್‌ಗಳಿಗೆ ನಡೆದ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ ಮೇಲುಗೈ ಸಾಧಿಸಿದೆ.
ಕಾಂಗ್ರೆಸ್ 8, ಬಿಜೆಪಿ 5 ಸ್ಥಾನಗಳನ್ನು ಗಳಿಸಿದೆ.
ಕಡಬ ಪಟ್ಟಣ ಪಂಚಾಯಿತಿಯ 13 ವಾರ್ಡ್‌ಗಳಿಗೆ ಭಾನುವಾರ ಚುನಾವಣೆ ನಡೆದಿತ್ತು.
ವಿಜೇತರ ವಿವರ
ಹಿಂದುಳಿದ ವರ್ಗ ಎ’ ಮಹಿಳೆಗೆ ಮೀಸಲಾದ ಕಳಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ತಮನ್ನಾ ಜಬೀನ್ 201 ಮತ ಪಡೆದು ವಿಜಯಿಯಾಗಿದ್ದಾರೆ.
ಪರಿಶಿಷ್ಠ ಜಾತಿ ಮಹಿಳೆಗೆ ಮೀಸಲಾದ ಕೋಡಿಬೈಲು ಕ್ಷೇತ್ರದಲ್ಲಿ ಜೆಪಿಯಿಂದ ಕುಸುಮ ಅಂಗಡಿಮನೆ 187 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ.
ಸಾಮಾನ್ಯ ಅಭ್ಯರ್ಥಿಗೆ ಮೀಸಲಾದ ಪನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಹಮ್ಮದ್ ಪೈಝಲ್ 320 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ.
ಸಾಮಾನ್ಯ ಮೀಸಲು ಬೆದ್ರಾಜೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸೈಮನ್ ಸಿ.ಜೆ 232 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ.
ಹಿಂದುಳಿದ ವರ್ಗಎ’ಗೆ ಮೀಸಲಾದ ಮಾಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಹನೀಫ್ ಕೆ.ಎಂ. 297 ಮತ ಪಡೆದು ವಿಜಯಿಯಾಗಿದ್ದಾರೆ.
ಸಾಮಾನ್ಯ ಮಹಿಳೆಗೆ ಮೀಸಲಾದ ಕಡಬ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ನೀಲಾವತಿ ಶಿವರಾಮ್ 314 ಮತ ಪಡೆದು ವಿಜಯಿಯಾಗಿದ್ದಾರೆ.
ಹಿಂದುಳಿದ ವರ್ಗ ಬಿ’ಗೆ ಮೀಸಲಾದ ಪಣೆಮಜಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ರೋಹಿತ್ ಗೌಡ 333 ಮತ ಪಡೆದು ವಿಜಯಿಯಾಗಿದ್ದಾರೆ.
ಸಾಮಾನ್ಯ ಮೀಸಲು ಪಿಜಕ್ಕಳ ಕ್ಷೇತ್ರದಲ್ಲಿ ಬಿಜೆಪಿಯಿಂದ ದಯಾನಂದ ಗೌಡ ಪಿ. 386 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ.
ಸಾಮಾನ್ಯ ಮಹಿಳೆಗೆ ಮಿಸಲಾದ ದೊಡ್ಡಕೊಪ್ಪ ಕ್ಷೇತ್ರದಲ್ಲಿ ಬಿಜೆಪಿಯಿಂದ ಗುಣವತಿ ರಘುರಾಮ 393 ಮತ ಪಡೆದು ವಿಜಯಿಯಾಗಿದ್ದಾರೆ.
ಸಾಮಾನ್ಯ ಮಹಿಳೆಗೆ ಮೀಸಲಾದ ಕೋಡಿಂಬಾಳ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಕ್ಷತಾ ಬಾಲಕೃಷ್ಣ ಗೌಡ265 ಮತ ಪಡೆದು ವಿಜಯಿಯಾಗಿದ್ದಾರೆ.
ಪರಿಶಿಷ್ಠ ಜಾತಿ ಅಭ್ಯರ್ಥಿಗೆ ಮೀಸಲಾದ ಮಜ್ಜಾರು ಕ್ಷೇತ್ರದಲ್ಲಿ ಬಿಜೆಪಿಯಿಂದ ಮೋಹನ 306 ಮತ ಪಡೆದು ವಿಜಯಿಯಾಗಿದ್ದಾರೆ.
ಪರಿಶಿಷ್ಠ ಪಂಗಡಕ್ಕೆ ಮೀಸಲಾದ ಪುಳಿಕುಕ್ಕು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕೃಷ್ಣ ನಾಯ್ಕ 315 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ.