


ಮಂಗಳೂರು : ಬಾರಿ ಕುತೂಹಲ ಮೂಡಿಸಿದ ಕಡಬ ಪಟ್ಟಣ ಪಂಚಾಯಿತಿಯ 13 ವಾರ್ಡ್‌ಗಳಿಗೆ ನಡೆದ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ ಮೇಲುಗೈ ಸಾಧಿಸಿದೆ.

ಇನ್ನೂ ಸಾಮಾನ್ಯ ಅಭ್ಯರ್ಥಿಗೆ ಮೀಸಲಾದ ಪನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಹಮ್ಮದ್ ಪೈಝಲ್ 320 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ.
ಮುಖ್ಯವಾಗಿ ನಾಲ್ಕು ಅಭ್ಯರ್ಥಿಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದು ಬಿಜೆಪಿ ಎಸ್ಡಿಪಿಐ ಹಾಗೂ ಮುಸ್ಲಿಂ ಲೀಗ್ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಇದ್ದು. ಕೊನೆ ಕ್ಷಣದಲ್ಲಿ ಮತದಾರರು ಮಹಮ್ಮದ್ ಪೈಝಲ್ ಕಡಬರವರ ಕೈ ಹಿಡಿದಿದ್ದಾರೆ.
ಸಾಮಾನ್ಯ ಅಭ್ಯರ್ಥಿಗೆ ಮೀಸಲಾದ ಪನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಹಮ್ಮದ್ ಪೈಝಲ್ 320 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಆದಂ ಕುಂಡೋಳಿ 75, ಎಸ್‌ಡಿಪಿಐನಿಂದ ಹಾರಿಸ್ ಕಳಾರ 6, ಮುಸ್ಲಿಂ ಲೀಗ್‌ನಿಂದ ಕೆ. ಅಬ್ದುಲ್ ರಝಾಕ್ 2 ಮತಗಳನ್ನು ಪಡೆದಿದ್ದಾರೆ.
ಯುವ ಕಾಂಗ್ರೆಸ್ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಹಮ್ಮದ್ ಪೈಝಲ್ ಅವರು ಮೊದಲ ಪ್ರಯತ್ನದಲ್ಲಿ ಮೇಲುಗೈ ಸಾಧಿಸಿದ್ದಾರೆ.